ವಿಟ್ಲ: ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಠಾಣಾ ಪೊಲೀಸರು ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ವಶಕ್ಕೆ ಪಡೆದ ಘಟನೆ ನ.4ರಂದು ನಡೆದಿದೆ.

ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೂಡ್ತಮುಗೇರು ಎಂಬಲ್ಲಿ ವಿಟ್ಲ ಠಾಣಾ ಎಸ್.ಐ. ರತ್ನಕುಮಾರ್ ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಬೋಳ್ಪದೆ ಕಡೆಯಿಂದ ಕೂಡ್ತಮುಗೇರು ಕಡೆಗೆ ಲಾರಿಯೊಂದು ಬಂದಿದ್ದು, ಅದನ್ಮು ತಡೆಸು ನಿಲ್ಲಿಸಿ ತಪಾಸಣೆ ನಡೆಸಿದಾಗ, ಲಾರಿಯಲ್ಲಿ ಕೆಂಪು ಕಲ್ಲು ತುಂಬಿಸಿಕೊಂಡು ಸಾಗಿಸುತ್ತಿರುವುದು ಕಂಡುಬಂದಿದ್ದು, ಲಾರಿ ಚಾಲಕ ಎನ್.ಸಿ.ಶರೀಪ್ (42 ವ.)ರವರನ್ನು ವಿಚಾರಿಸಿದಾಗ,ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಕೂಡಲೇ ಪೊಲೀಸರು ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.