ಕಾಣಿಯೂರು: ಸಮಗ್ರ ಶಿಕ್ಷಣ ಕರ್ನಾಟಕ ಇವರ ಸೂಚನೆಯಂತೆ ಎಸ್ ಡಿ ಎಂ ಸಿ ಸದಸ್ಯರಿಗೆ ಉತ್ತಮ ಎಸ್ ಡಿ ಎಂ ಸಿ ಪ್ರಶಸ್ತಿಯ ಅಂಗವಾಗಿ ಯೂಟ್ಯೂಬ್ ಲೈವ್ ಕಾರ್ಯಾಗಾರವನ್ನು ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ 5ರಂದು ಹಮ್ಮಿಕೊಳ್ಳಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಸುನೀತಾ ಗಣೇಶ್, ಉಪಾಧ್ಯಕ್ಷ ರಮೇಶ್ ಉಪ್ಪಡ್ಕ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. 2025-26ನೇ ಸಾಲಿನಲ್ಲಿ ಬ್ಲಾಕ್ ಮಟ್ಟದಲ್ಲಿ ಉತ್ತಮ ಎಸ್ ಡಿ ಎಂ ಸಿ ಪ್ರಶಸ್ತಿ ಸಿಗಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಲಾಖೆಯು ಈ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ವಿದ್ಯಾವಾಹಿನಿ ಪೋರ್ಟಲ್ ನಲ್ಲಿ ಮಾಹಿತಿಯನ್ನು ಇಂದೀಕರಿಸುವ ಕುರಿತು ವಿವರಿಸಲಾಯಿತು.
