ರಾಮಕುಂಜ; ಕಡಬ ತಾಲೂಕು ಹಳೆನೇರಂಕಿ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಧ್ವಜಾರೋಹಣ ಡಿ.6ರಂದು ಬೆಳಿಗ್ಗೆ ನಡೆಯಿತು.

ಶ್ರೀ ರಾಮಕುಂಜೇಶ್ವರ ಪ.ಪೂ. ಕಾಲೇಜಿನ ನಿವೃತ್ತ ಉಪನ್ಯಾಸಕ ಮಾಧವ ಆಚಾರ್ಯ ಇಜ್ಜಾವು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ರಮೇಶ್ ರೈ ರಾಮಮಜಲು, ಎಸ್ ಡಿ ಎಂ ಸಿ ಅಧ್ಯಕ್ಷ ವೀರೇಂದ್ರ ಪಾಲೆತ್ತಡ್ಡ, ಉಪಾಧ್ಯಕ್ಷೆ ಸುಲೋಚನಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜನಾರ್ದನ ಪೂಜಾರಿ ಕದ್ರ, ಶತಮಾನೋತ್ಸವ ಸಮಿತಿ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಊರಿನ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರೂ, ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯೂ ಆದ ವೈ.ಸಾಂತಪ್ಪ ಗೌಡ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಗೌಡ ನಿರೂಪಿಸಿದರು. ಸಹ ಶಿಕ್ಷಕರು ಸಹಕರಿಸಿದರು