ದರ್ಬೆ ಬೆಥನಿ ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

0

ಪುತ್ತೂರು: ದರ್ಬೆ ಪಾಂಗಾಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿಶೇಷ ವೃತ್ತಿ ಮಾರ್ಗದರ್ಶನ ಶಿಬಿರವು ಡಿ.6ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿದ್ದ ಯೆನೇಪೋಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಡಾ| ರಾಜೇಶ್ ಗ್ರೇಶನ್ ಡಿಸೋಜಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕನಸುಗಳ ಮಹತ್ವ, ಯಶಸ್ಸಿಗೆ ಸೂತ್ರ, ಶೈಕ್ಷಣಿಕ ಪ್ರಗತಿಗೆ ಮತ್ತು ಒತ್ತಡ ಕಡಿಮೆ ಮಾಡಲು ಆಸಕ್ತಿ, ಗಮನ, ದೃಢಸಂಕಲ್ಪ ಮತ್ತು ಸೂಕ್ತ ವೇಳಾಪಟ್ಟಿಯನ್ನು ಅನುಸರಿಸುವ ಮಹತ್ವವನ್ನು ಅವರು ಒತ್ತಿ ಹೇಳಿದರು.


ಶಾಲೆಯ ಪ್ರಾಂಶುಪಾಲೆ ಭಗಿನಿ ಅನಿತಾ ಟ್ರೆಸ್ಸಿ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಶಿಕ್ಷಕರು ಸಹಕರಿಸಿದರು.

LEAVE A REPLY

Please enter your comment!
Please enter your name here