ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಸಹಯೋಗ, ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದಲ್ಲಿ ಡಿಸೆಂಬರ್ 20ರಂದು ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ ಗಡಿ- ಸಂಸ್ಕೃತಿ ಉತ್ಸವದ ಅಂಗವಾಗಿ ಏರ್ಪಡಿಸುವ ‘ಕಲಾರ್ಣವ-2025’ ಸಾಂಸ್ಕೃತಿಕ ಕಾರ್ಯಕ್ರಮದ ಆಹ್ವಾನ ಪತ್ರವನ್ನು ಶಾಸಕ ಅಶೋಕ್ ಕುಮಾರ್ ರೈ ಶನಿವಾರ ಪುತ್ತೂರಲ್ಲಿ ಬಿಡುಗಡೆಗೊಳಿಸಿದರು.

ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸುವಲ್ಲಿ ಎಲ್ಲರ ಸಹಕಾರ ಅತ್ಯವಶ್ಯಕ. ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಯುವಂತೆ ಶುಭ ಹಾರೈಸಿದರು. ಈ ಸಂದರ್ಭ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯ ವಿನಯ ಸುವರ್ಣ, ಬನ್ನೂರು ರೈತರ ಸೇವಾ ಸಹಕಾರಿ ಸಂಘ
ಬೊಳುವಾರು ಇದರ ನಿರ್ದೇಶಕ ಸುಭಾಸ್ ನಾಯಕ್, ನೃತ್ಯೋಪಾಸನಾ ಕಲಾ ಅಕಾಡೆಮಿ ಸ್ಥಾಪಕ ಟ್ರಸ್ಟಿ ಹಾಗೂ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್, ಕಾರ್ಯದರ್ಶಿ ಆತ್ಮಭೂಷಣ್ ಮತ್ತಿತರರಿದ್ದರು.
ವಯಲಿನ್ ಕಲಾವಿದೆ ಗಂಗಾ ಶಶಿಧರ್, ಶಮಂತಕ ಪುತ್ತೂರಿಗೆ ಅಂತಾರಾಷ್ಟ್ರೀಯ ಖ್ಯಾತಿಯ ವಯಲಿನ್ ಬಾಲ ಕಲಾವಿದೆ ಕುಮಾರಿ ಗಂಗಾ ಶಶಿಧರನ್ ಇದೇ
ಮೊದಲ ಬಾರಿಗೆ ಪುತ್ತೂರಿಗೆ ಆಗಮಿಸುತ್ತಿದ್ದು, ಅವರ ವಯಲಿನ್ ವೈಭವ ನಡೆಯಲಿದೆ. ಇದೇ ಸಂದರ್ಭ ಡ್ಯಾನ್ಸ್ ಫೆಡರೇಶನ್ ಆಫ್ ಇಂಡಿಯಾದ ಯುವ ಕಲಾ ಪ್ರಶಸ್ತಿ ಪುರಸ್ಕೃತ ಭರತನಾಟ್ಯ ಬಾಲಕಲಾವಿದ ಮಾಸ್ಟರ್ ಶಮಂತಕ ಇವರಿಂದ ಭರತನಾಟ್ಯ ಏರ್ಪಡಲಿದೆ. ಅಲ್ಲದೆ ರಾಜ್ಯದ ವಿವಿಧ ಜಾನಪದ ಕಲಾ ತಂಡಗಳ ಜಾನಪದ ನೃತ್ಯ ಪ್ರದರ್ಶನ ನಡೆಯಲಿದೆ. ಈ ಕಲಾರ್ಣವ-2025ನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ.