




ಪುತ್ತೂರು: ಉಪ್ಪಳಿಗೆಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಕೋಮು ದ್ವೇಷದ ಮತ್ತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಲ್ಲಿ ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿದಿದ್ದು 9ರಂದು ತೀರ್ಪು ಪ್ರಕಟವಾಗಲಿದೆ.




ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಜೊತೆ ವಾದ ಮಂಡನೆಗೆ ಅವಕಾಶ ನೀಡುವಂತೆ ಕೋರಿ, ಪ್ರಕರಣದ ದೂರುದಾರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು ದೂರುದಾರರ ಪರ ವಕೀಲರಾಗಿ ಪಿ.ಕೆ.ಸತೀಶನ್ ಅವರು ಡಿ.6ರಂದು ವಾದ ಮಂಡಿಸಿದರು.





ಡಾ.ಪ್ರಭಾಕರ ಭಟ್ ಅವರ ಪರ ವಕೀಲ ಮಹೇಶ್ ಕಜೆ ಅವರು ಈಗಾಗಲೇ ವಾದ ಮಂಡನೆ ಮಾಡಿದ್ದಾರೆ.ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ.ಭಟ್ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಡಾ.ಪ್ರಭಾಕರ ಭಟ್ ಅವರಿಗೆ ಈಗಾಗಲೇ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿ ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯ ತೀರ್ಪು ಕಾಯ್ದಿರಿಸಿ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿದೆ.








