ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಯಕ್ಷಗಾನ ಬಯಲಾಟ ಸಮಿತಿ ಪಟ್ಟೆ ಇದರ ವತಿಯಿಂದ ಯಕ್ಷಗಾನ ಬಯಲಾಟ

0

ಬಡಗನ್ನೂರು: ಜಗತ್ತಿನಲ್ಲಿ ಇಡೀ ರಾತ್ರಿ ನಡೆಯುವ ಕಲೆ ಇದ್ದರೆ ಅದು ಯಕ್ಷಗಾನ ಮಾತ್ರ. ಕಟೀಲು ದೇವರಿಗೆ ಅತ್ಯಂತ ಪ್ರಿಯವಾದುದು. ದೇವರ ಚರಿತ್ರೆಯನ್ನು ಜನರಿಗೆ ತಿಳಿಸುವ ಮಾಧ್ಯಮವಾಗಿ ಯಕ್ಷಗಾನ ಕೆಲಸ ಮಾಡುತ್ತಿದೆ ಎಂದು ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ಹರಿನಾರಾಯಣದಾಸ ಅಸ್ರಣ್ಣ ಹೇಳಿದರು.

ಅವರು ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಯಕ್ಷಗಾನ ಬಯಲಾಟ ಸಮಿತಿ ಪಟ್ಟೆ ಇದರ ವತಿಯಿಂದ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವಠಾರದಲ್ಲಿ ಡಿ.6ರಂದು ಆಯೋಜಿಸಲಾದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ದೇವರು ಬಂದು ಯಕ್ಷಗಾನ ನೋಡುತ್ತಾರೆ ಎನ್ನುವ ನಂಬಿಕೆ ಇದೆ. ಯಕ್ಷಗಾನ ಕಲೆ ಅಪಾರವಾದ ಶಕ್ತಿಯನ್ನು ಹೊಂದಿದೆ ಅದು ಕನ್ನಡದಲ್ಲಿ ಎಂದ ಅವರು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಳೆದ ಕೆಲವು ವರ್ಷಗಳಿಂದ ಅಧ್ಯಾಪಕರ ನೇಮಕ ಆಗಿಲ್ಲ ಆದರೆ ಆಂಗ್ಲ ಮಾಧ್ಯಮಕ್ಕೆ ಎಲ್ಲಾ ಕಡೆಯಿಂದ ಪ್ರೋತ್ಸಾಹ ನೀಡಲಾಗುತ್ತಿದೆ. ದೇವಾಲಯಗಳ ಮೂಲಕವೂ ಶಾಲೆ ಉಳಿಸುವ ಪ್ರಯತ್ನ ಅಭಿನಂದನಾರ್ಹವಾಗಿದೆ.ಹಲವು ವರ್ಷಗಳೇ ಕಳೆದಿವೆ. ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಪರೋಕ್ಷ ರೂಪದಲ್ಲಿ ದೇವರು ಕಾರಣ ಆಗುವುದು ಉತ್ತಮ ಬೆಳವಣಿಗೆ ಎಂದರು.


ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾಸಂಸ್ಥೆಯಲ್ಲಿ ದೇವಿಯ ಕಾರ್ಯಕ್ರಮ ನಡೆದರೆ ಸರಸ್ವತಿ ಬಂದಂತೆ. ತಾಯಿಯ ಆರಾಧನೆಯೊಂದಿಗೆ ಜ್ಞಾನ ಸಂಪತ್ತು ವೃದ್ಧಿಯಾಗುತ್ತದೆ ಎಂದರು.


ಪಟ್ಟೆಯ ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಯಕ್ಷಗಾನ ಬಯಲಾಟ ಸಮಿತಿ ಅಧ್ಯಕ್ಷ ಅಚ್ಯುತ ಭಟ್ ಪಾದೆಕರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಯಲಾಟ ಸಮಿತಿ ಪ್ರಮುಖರಾದ ಪದ್ಮನಾಭ ರೈ ಅರೆಪ್ಪಾಡಿ, ರಘುರಾಮ, ಸುಬ್ಬಪ್ಪ ಪಾಟಾಳಿ ಅತಿಥಿಗಳನ್ನು ಗೌರವಿಸಿದರು.


ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ಸ್ವಾಗತಿಸಿ, ನಿವೃತ್ತ ಮುಖ್ಯಶಿಕ್ಷಕಿ ಶಂಕರಿ ಕೆ. ವಂದಿಸಿದರು. ಪ್ರಾಧ್ಯಾಪಕ ಹರಿಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು.


ಕಾರ್ಯಕ್ರಮದಲ್ಲಿ ಬಯಲಾಟ ಸಮಿತಿ ಗೌರವಾಧ್ಯಕ್ಷರುಗಳು, ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.


ಅನ್ನಸಂತರ್ಪಣೆ
ಕಾರ್ಯಕ್ರಮದಲ್ಲಿ ಸಾವಿರಕ್ಕೂ ಮಿಕ್ಕಿ ಮಂದಿಭಾಗವಹಿಸಿ, ಯಕ್ಷಗಾನ ವೀಕ್ಷಸಿ ಅನ್ನ ಪ್ರಸಾದ ಸ್ವೀಕರಿಸಿದರು.
ಭವ್ಯ ಸ್ವಾಗತ
ಆರಂಭದಲ್ಲಿ ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ಹರಿನಾರಾಯಣದಾಸ ಅಸ್ರಣ್ಣ ರವರನ್ನು ಬ್ಯಾಂಡ್ ವಾಧ್ಯಘೋಷ ಮೂಲಕ ಬರಮಾಡಿಕೊಳ್ಳಲಾಯಿತು.
ಗೌರವಾರ್ಪಣೆ
ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ಹರಿನಾರಾಯಣದಾಸ ಅಸ್ರಣ್ಣರವರಿಗೆ ಬಯಲಾಟ ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ಫಲಾಪುಷ್ಪ ನೀಡಿ ಸಮಿತಿ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.
ಕಾರ್ಯಕ್ರಮದ್ದುಕ್ಕೂ ಬೇಡಿಮದ್ದು ಪ್ರದರ್ಶನ ನಡೆದು ಕಾರ್ಯಕ್ರಮಕ್ಕೆ ಮರೆಗು ತುಂಬಿತ್ತು.

LEAVE A REPLY

Please enter your comment!
Please enter your name here