




ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ 2023-2025ನೇ ಸಾಲಿನ ಮಹಾಸಭೆ ಡಿ.9ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1ರವರೆಗೆ ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದ ಒಂದನೇ ಮಹಡಿಯಲ್ಲಿ ನಡೆಯಲಿದೆ.




ಯೂನಿಯನ್ ಜಿಲ್ಲಾಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಯಾಗಿ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಭಾಗವಹಿಸಲಿದ್ದಾರೆ.





ಎಲ್ಲಾ ಸದಸ್ಯರು ಸಭೆಗೆ ಹಾಜರಾಗಿ ಯೂನಿಯನ್ ಕಾರ್ಯ ಚಟುವಟಿಕೆಗಳಿಗೆ ಸಹಕಾರ ನೀಡುವಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಜೆ.ಪಿಂಟೋ ಮಂಗಳೂರು, ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ರಾಮ್‌ದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊಟ್ಟೆತ್ತಡ್ಕ ವಿನಂತಿಸಿದ್ದಾರೆ.










