ರಾಮಕುಂಜ: ಶತಮಾನೋತ್ಸವ ಸಂಭ್ರಮದಲ್ಲಿರುವ ಕಡಬ ತಾಲೂಕಿನ ಹಳೆನೇರಂಕಿ ಸರಕಾರಿ ಉ.ಹಿ.ಪ್ರಾ.ಶಾಲೆಗೆ ಡಿ.6ರಂದು ರಾತ್ರಿ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಭೇಟಿ ನೀಡಿದರು.
ಕ್ಯಾ| ಬ್ರಿಜೇಶ್ ಚೌಟ ಅವರು ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟರ್ ಕೊಠಡಿ ಉದ್ಘಾಟಿಸಿದರು. ಶಾಲಾ ಶತಮಾನೋತ್ಸವ ಸಮಿತಿ ವತಿಯಿಂದ ಸಂಸದರಿಗೆ ಶಾಲು,ಹಾರ,ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಶತಮಾನೋತ್ಸವ ಸಮಿತಿ ಅಧ್ಯಕ್ಷ ರಮೇಶ ರೈ ರಾಮಮಜಲು, ಪ್ರಧಾನ ಕಾರ್ಯದರ್ಶಿ, ಶಾಲಾ ಮುಖ್ಯಶಿಕ್ಷಕರೂ ಆದ ವೈ.ಸಾಂತಪ್ಪ ಗೌಡ, ಎಸ್‌ಡಿಎಂಸಿ ಅಧ್ಯಕ್ಷ ವೀರೇಂದ್ರ ಪಾಲೆತ್ತಡ್ಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜನಾರ್ದನ ಪೂಜಾರಿ ಕದ್ರ ಸಹಿತ ಶತಮಾನೋತ್ಸವ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ, ಎಸ್‌ಡಿಎಂಸಿ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
