ಕಾಣಿಯೂರು: ಕುದ್ಮಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ಕ್ರೀಡಾಕೂಟವು ಡಿ 7ರಂದು ಕುದ್ಮಾರು ಶಾಲೆಯಲ್ಲಿ ನಡೆಯಿತು.
ಶಾಲಾ ಮುಖ್ಯಗುರು ಮಿನಿ ವರ್ಗೀಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ದೇವರಾಜ್ ನೂಜಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ಅನ್ಯಾಡಿ, ಕಾರ್ಯದರ್ಶಿ ನಾಗೇಶ್ ಕೆಡೆಂಜಿ, ನಿವೃತ್ತ ಮುಖ್ಯಗುರು ಕುಶಾಲಪ್ಪ ಬಿ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಕ ವೃಂದದವರು, ಹಿರಿಯ ವಿದ್ಯಾರ್ಥಿಗಳು, ಊರವರು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಯಶೋಧರ ಕೆಡೆಂಜಿಕಟ್ಟ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲು ಸಿದ್ಧಿಕ್ ಪಂಜ ಸಹಕರಿಸಿದರು. ಭೋಜನದ ಪ್ರಾಯೋಜಕರಾಗಿ ಯೋಗೀಶ್ ಬರೆಪಾಡಿ ಮತ್ತು ಗೋಪಾಲಕೃಷ್ಣ ನಾಯ್ಕ ಕಾರ್ಲಾಡಿ ಸಹಕರಿಸಿದರು.
