




ರಾಮಕುಂಜ: ಡಿ.20 ಹಾಗೂ 21ರಂದು ಕುಟ್ರುಪ್ಪಾಡಿ ಗ್ರಾಮದ ಕೇಪು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಡಿ.4ರಂದು ಒಡಿಯೂರು ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು.




ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಸಮ್ಮೇಳನ ಸ್ವಾಗತ ಸಮಿತಿ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ, ಸಮ್ಮೇಳನಾಧ್ಯಕ್ಷರಾದ ಕೆ.ಸೇಸಪ್ಪ ರೈ, ತುಳು ಸಂಘಟಕರೂ ಆದ ಉಪ್ಪಿನಂಗಡಿ ಧನ್ವಂತರಿ ಆಸ್ಪತ್ರೆಯ ಡಾ.ನಿರಂಜನ್ ರೈ, ಒಡಿಯೂರು ಸೇವಾ ಬಳಗದ ಮುಂಬೈ ಉಸ್ತುವಾರಿ ಪ್ರಕಾಶ್, ಆತೂರು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್‌ಕುಮಾರ್ ರೈ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿ ಲೋಕನಾಥ ರೈ ಕೇಳ್ಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.













