ಬೆಟ್ಟಂಪಾಡಿ: ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಿಯದರ್ಶಿನಿಗೆ ದ್ವಿತೀಯ ಸಮಗ್ರ

0

ಬೆಟ್ಟಂಪಾಡಿ: ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆಯಲ್ಲಿ ಪುತ್ತೂರು ವಲಯ ಮಟ್ಟದ ಪ್ರತಿಭಾಕಾರಂಜಿ ಪ್ರತಿಭಾ ದರ್ಪಣ-2025-26 ಕಾರ್ಯಲ್ರಮ ನಡೆಯಿತು.

ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ವಸುಶರ್ಮ ಸಂಸ್ಕೃತ ಭಾಷಣದಲ್ಲಿ ಪ್ರಥಮ ಸ್ಥಾನ, 10ನೇ ತರಗತಿ ವಿದ್ಯಾರ್ಥಿನಿ ಕವನ ಇವರು ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಎಂಟನೇ ತರಗತಿ ವಿದ್ಯಾರ್ಥಿ ಅಭಿನವರಾಜ್ ಎನ್ ಇವರು ಹಿಂದಿ ಭಾಷಣದಲ್ಲಿ ಪ್ರಥಮ ಸ್ಥಾನ, ವಸು ಶರ್ಮ ಹಾಗೂ ಚಿಂತನ್ ರೈ ಇವರು ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದಲ್ಲದೇ, ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯಗುರು ರಾಜೇಶ್ ಎನ್ ಹಾಗೂ ಆಡಳಿತ ಮಂಡಳಿ, ಪೋಷಕ ವೃಂದ,ಶಿಕ್ಷಕ ವೃಂದದವರು ಅಭಿನಂಧಿಸಿದ್ದಾರೆ.

LEAVE A REPLY

Please enter your comment!
Please enter your name here