ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ರಾಜ್ಯ ಮಟ್ಟದ ಗೌರವ ಪ್ರಶಸ್ತಿ ಪುರಸ್ಕೃತ ಟಿ. ಎಂ. ಶಹೀದ್ ರವರಿಗೆ ಸುಳ್ಯದಲ್ಲಿ ಅಭಿನಂದನೆ

0

ಪುತ್ತೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಪುತ್ತೂರಿನಲ್ಲಿ ನಡೆದ ಬ್ಯಾರಿ ಚಮ್ಮನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ರವರಿಗೆ ಸುಳ್ಯದಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು.

ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಜನತಾ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಖಜಾಂಚಿ ಕೆ. ಬಿ. ಇಬ್ರಾಹಿಂ, ಕನಕ ಮಜಲು ಸುಣ್ಣಮೂಲೆ ಜುಮ್ಮಾ ಮಸ್ಜಿದ್ ಕಾರ್ಯದರ್ಶಿ ಇಕ್ಬಾಲ್ ಸುಣ್ಣಮೂಲೆ, ಈ ವಾರ್ತೆ ಸಂಪಾದಕ ರಶೀದ್ ಜಟ್ಟಿಪ್ಪಳ್ಳ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here