ಪುತ್ತೂರು: ಹಾರಾಡಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಪ್ರಯುಕ್ತ ಡಿ.6ರಂದು ವಿದ್ಯಾರ್ಥಿಗಳ ಸಾಂಸ್ಕೃತಿಕ ವೈವಿಧ್ಯ ಕಲೋತ್ಕರ್ಷ-2025 ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ 9.30ರಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಅಪರಾಹ್ನ ಅಂಗನವಾಡಿ ಮಕ್ಕಳಿಂದ ಚಿಣ್ಣರ ಚಿಲಿಪಿಲಿ, ವಿದ್ಯಾರ್ಥಿಗಳಿಂದ ಇಂಗ್ಲಿಷ್ ನಾಟಕ ಮತ್ತು ಕಲೋತ್ಕರ್ಷ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಿತು. ಮುಖ್ಯಶಿಕ್ಷಕರಾದ ಕುಕ್ಕ ಕೆ. ಹಾಗೂ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷೆ ಸುಲೋಚನಿ ಹಾಗೂ ಸದಸ್ಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರು ವಿವಿಧ ಕಾರ್ಯಕ್ರಮ ನಿರ್ವಹಿಸಿ ಸಹಕರಿಸಿದರು.