ನಿವೃತ್ತ ಆರೋಗ್ಯ ನಿರೀಕ್ಷಕ ಜನಾರ್ದನ ಶೆಟ್ಟಿ ನಿಧನ

0

ನೆಲ್ಯಾಡಿ: ಇಲ್ಲಿನ ಕುಂಡಡ್ಕ ನಿವಾಸಿ, ನಿವೃತ್ತ ಆರೋಗ್ಯ ನಿರೀಕ್ಷಕ ಜನಾರ್ದನ ಶೆಟ್ಟಿ (84ವ.)ಅವರು ಅಲ್ಪಕಾಲದ ಅಸೌಖ್ಯದಿಂದ ಡಿ.7ರಂದು ಸಂಜೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಜನಾರ್ದನ ಶೆಟ್ಟಿ ಅವರು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ನಿರೀಕ್ಷಕರಾಗಿ 30ವರ್ಷ ಸೇವೆ ಸಲ್ಲಿಸಿ ಬಳಿಕ ಭಡ್ತಿಹೊಂದಿ ಅರಸಿನಮಕ್ಕಿಯ ಹತ್ಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಅಲ್ಲಿ 2 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಸೌಮ್ಯ ಸ್ವಭಾವದ ಜನಾರ್ದನ ಶೆಟ್ಟಿಯವರು ಡಿಡಿಟಿ ಹೆಲ್ತ್ ಇನ್ಸ್‌ಪೆಕ್ಟರ್ ಎಂದೇ ಚಿರಪರಿಚಿತರಾಗಿದ್ದರು. ಮೃತರು ಪತ್ನಿ ಮಂಗಳೂರು ಎಎನ್‌ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮೀನಾಕ್ಷಿಯವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here