ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ – ಪ್ರತಿಷ್ಠಿತ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಕೀರ್ತನ್ KP ಭಾರತೀಯ ವಾಯುಸೇನೆಗೆ ಆಯ್ಕೆ

0

ಪರಿಶ್ರಮಕ್ಕೆ ತಕ್ಕ ಪ್ರತಿಫಲ ಪಡೆದ ಗ್ರಾಮೀಣ ಪ್ರತಿಭೆ

ಪುತ್ತೂರು: ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಕೀರ್ತನ್ KP ರವರು ಭಾರತೀಯ ವಾಯುಸೇನೆಯ ನೇಮಕಾತಿಯ ನೇಮಕಾತಿ ಪ್ರಕ್ರಿಯೆಗಳಲ್ಲಿ ಉತ್ತೀರ್ಣರಾಗಿ ಆಯ್ಕೆಗೊಂಡಿರುತ್ತಾರೆ, ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳ ಆಯ್ಕೆ ಪ್ರಕ್ರಿಯೆಗಳಿಗೆ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣನಕ್ಕೆ ಮತ್ತೊಂದು ಬಹುದೊಡ್ಡ ಯಶಸ್ಸು ದೊರಕಿದ್ದು ನಿರಂತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಕೀರ್ತನ್ ರವರ ಸಾಧನೆ ಸಾಕ್ಷಿಯಾಗಿದೆ.


ವಿದ್ಯಾಮಾತಾ ಅಕಾಡೆಮಿಯು ನೀಡಿದ ನಿರಂತರ ತರಬೇತಿ ಪಡೆದ ಇವರು ಈಗಾಗಲೇ ಭಾರತೀಯ ಸೇನೆಯ ಅಗ್ನಿಪಥ್ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸದ್ಯದಲ್ಲೇ ನಡೆಯುವ ದೈಹಿಕ ಸದೃಢತೆ ಪರೀಕ್ಷೆಗೆ ಅರ್ಹತೆ ಗಳಿಸಿರುವುದು ಗಮನಾರ್ಹ ವಿಷಯವಾಗಿದೆ.


ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಹಿರೆಬಂಡಾಡಿಯ ಕಂಡಲಾಜೆ ನಿವಾಸಿಗಳಾದ ಪದ್ಮಯ್ಯ ಗೌಡ ಮತ್ತು ಪುಷ್ಪಲತಾ ದಂಪತಿಗಳ ಪುತ್ರರಾದ ಕೀರ್ತನ್ ರವರ ಸಾಧನೆಗೆ ಸಂಸ್ಥೆಯ ಆಡಳಿತ ನಿರ್ದೇಶಕರು ” ಕೀರ್ತನ್ ರವರ ಸಾಧನೆಯು ಇನ್ನಷ್ಟು ಅಭ್ಯರ್ಥಿಗಳು ರಕ್ಷಣಾ ಪಡೆಗಳಿಗೆ ಸೇರುವ ಕನಸುಗಳು ಈಡೇರಲಿ ಎಂದು ಅಕಾಡೆಮಿಯ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.


ಇವರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ತರಬೇತುದಾರರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here