




ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಾಬ್ಧಿಯ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಮುಂಡೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಶಿವಕೃಪಾ ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.





ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ಸವಿನೆನಪಿಗಾಗಿ ನಡೆದ ಕಾರ್ಯಕ್ರಮದಲ್ಲಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚ ನೀಡಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ದ.ಮಾ.ರವೀಂದ್ರ ಅವರು ಆಗಮಿಸಿ ಶುಭಹಾರೈಸಿದರು.





ಈ ಸಂದರ್ಭದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಕೇಶವಪ್ರಸಾದ್, ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡ್, ಬಜರಂಗದಳದ ಪುತ್ತೂರು ನಗರ ಪ್ರಖಂಡ ಸಂಯೋಜಕರಾದ ಜಯಂತ್ ಕುಂಜೂರುಪಂಜ, ನಗರ ಉಪಾಧ್ಯಕ್ಷ ಸೇಶಪ್ಪ ಬೆಳ್ಳಿಪ್ಪಾಡಿ, ನಗರ ಸಹ ಸಂಯೋಜಕ ರೂಪೇಶ್ ಬಲ್ನಾಡ್, ಗ್ರಾಮಾಂತರ ಪ್ರಖಂಡ ಗೋರಕ್ಷಾ ಪ್ರಮುಖ್ ಪ್ರದೀಪ್ ಅಜಲಡ್ಕ, ಸಂದೀಪ್,ನಾಗೇಶ್ ಮತ್ತಿತರ ಕಾರ್ಯಕರ್ತರು ಮತ್ತು ಮನೆಯವರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.








