





ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪುತ್ತೂರು ನಗರ ಠಾಣೆಯ ವತಿಯಿಂದ ಪುರುಷರಕಟ್ಟೆಯ ಸರಸ್ವತಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವು ಡಿ.10ರಂದು ನಡೆಯಿತು.




ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ ಇವರು ಮಾಹಿತಿ ಕಾರ್ಯಕ್ರಮ ನಡೆಸಿಕೊಟ್ಟರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಕ್ಯಾಂಪಸ್ ಮೆನೇಜರ್ ಕೃಷ್ಣಪ್ಪ ಬಿ.ಕೆ, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ, ಪೊಲೀಸ್ ಕಾನ್ಸ್ಟೇಬಲ್ ನವೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಣ ಸಂಯೋಜಕರಾದ ಶ್ರೀಲಕ್ಷ್ಮೀ ಮೊಳೆಯಾರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಉಪ ಮುಖ್ಯಶಿಕ್ಷಕಿ ದಿವ್ಯ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಸಹಕರಿಸಿದರು.














