ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಾಮಾಜಿಕ ಪರಿಶೋಧನೆ ನಿರ್ದೇಶನಾಲಯ ಬೆಂಗಳೂರು, ಗ್ರಾಮ ಪಂಚಾಯತ್ ಕಾರ್ಯಾಲಯ ಪುಣಚ ಇದರ 2025-26ನೇ ಸಾಲಿನ ಪ್ರಥಮ ಸುತ್ತಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಕೇಂದ್ರ ಸರಕಾರದ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಡಿ.11ರಂದು ಬೆಳಿಗ್ಗೆ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ನೋಡೆಲ್ ಅಧಿಕಾರಿಯಾಗಿ ವಲಯ ಅರಣ್ಯಾಧಿಕಾರಿ ಸಾಮಾಜಿಕ ಅರಣ್ಯ ಇಲಾಖೆ ಬಂಟ್ವಾಳ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆ ನಡೆಯಲಿದೆ. ಆದ್ದರಿಂದ ಹುಣಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಎಲ್ಲಾ ಗ್ರಾಮಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ತ್ರೀಶಕ್ತಿ ಗುಂಪಿನ ಸದಸ್ಯರು, ಉದ್ಯೋಗ ಚೀಟಿದಾರರು ಗ್ರಾಮಸಭೆಗೆ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಪಂಚಾಯತ್ ಅಧ್ಯಕ್ಷೆ ಯಶೋಧ ಯಾನೆ ಬೇಬಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಪ್ರಭಾರ ಅಭಿವೃದ್ಧಿ ಅಧಿಕಾರಿ ಸೃಜನ್ ಎ.ಜಿ, ದ್ವಿ.ದರ್ಜೆ ಲೆಕ್ಕಸಹಾಯಕಿ ಪಾರ್ವತಿ ಕೆ, ಹಾಗೂ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರ ಪ್ರಕಟಣೆ ತಿಳಿಸಿದೆ.
