




ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ಬಳಿ ಪಿಕಪ್ ವಾಹನದಲ್ಲಿ ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿರುವುದು ಪೊಲೀಸರ ತಪಾಸಣೆ ವೇಳೆ ಬೆಳಕಿಗೆ ಬಂದಿದ್ದು, ಘಟನೆ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎ.ಎಸ್.ಐ ಗುಣಪಾಲ ಜೆ ಅವರು ಡಿ.8ರಂದು ಸಿಬ್ಬಂದಿಗಳ ಜೊತೆ ಕೌಡಿಚ್ಚಾರ್ನಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಪಿಕಪ್ ವಾಹನವನ್ನು ನಿಲ್ಲಿಸಿ ಪರಿಶೀಲಿಸಿದಾಗ ಮರಳು ತುಂಬಿರುವ ಕುರಿತು ಪರವಾನಿಗೆ ಕೇಳಿದಾಗ ಪರವಾನಿಗೆ ಇಲ್ಲದಿರುವುದು ಬೆಳಕಿಗೆ ಬಂದಿದೆ.





ಘಟನೆ ಕುರಿತು ಪಿಕಪ್ ವಾಹನದ ಚಾಲಕ ನಾರಾಯಣ ಅವರಲ್ಲಿ ಮರಳು ಸಾಗಾಟದ ಪರವಾನಿಗೆ ಇಲ್ಲದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.








