




ಪುತ್ತೂರು: ಅರಿಯಡ್ಕ ಗ್ರಾಮದ ಪಾಪೆಮಜಲು ಸರಕಾರಿ ಪ್ರೌಢ ಶಾಲಾ ವಾರ್ಷಿಕ ಕ್ರೀಡಾಕೂಟವು ದ.11ರಂದು ಬೆಳಿಗ್ಗೆ ನಡೆಯಲಿದೆ. ಅರಿಯಡ್ಕ ಗ್ರಾಪಂ ಅಧ್ಯಕ್ಷ ಸಂತೋಷ್ ಕುಮಾರ್ ಕುತ್ಯಾಡಿ ಧ್ವಜಾರೋಹಣ ಮಾಡಲಿದ್ದು, ವಲಯ ಅರಣ್ಯ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ರೈ ಕುತ್ಯಾಡಿ ಕ್ರೀಡಾಕೂಟದ ಉದ್ಘಾಟನೆ ಮಾಡಲಿದ್ದಾರೆ. ಪ್ರೌಢ ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಸಭಾಧ್ಯಕ್ಷತೆ ವಹಿಸಲಿದ್ದು ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಶಾಲಾ ಮುಖ್ಯಗುರು ಮೋನಪ್ಪ ಬಿ.ಸಭಾಧ್ಯಕ್ಷತೆ ವಹಿಸಲಿದ್ದು ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕ್ರೀಡಾಭಿಮಾನಿಗಳು, ಶಿಕ್ಷಣ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್, ಮುಖ್ಯಗುರು ಮೋನಪ್ಪ ಬಿ ಹಾಗೂ ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದ ಪ್ರಕಟಣೆ ತಿಳಿಸಿದೆ.








