ಪುತ್ತೂರು: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಕೆಪಿ ಸಂಜೀವ ರೈ (ಹಿರಿಯ ವಿದ್ಯಾರ್ಥಿ ಹಾಗೂ ಬಡಗನ್ನೂರು ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರು), ಶಾಲಾ ಪ್ರಾರಂಭದ ದಿನಗಳನ್ನು ನೆನಪಿಸಿಕೊಂಡು ,ಮುಂಬರುವ ದಿನಗಳಲ್ಲಿ ಶಾಲೆ ಇನ್ನಷ್ಟು ಪ್ರಗತಿಯನ್ನು ಕಾಣಲಿ ಎಂಬುದಾಗಿ ಆಶಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿ ವಾಸುದೇವ ಭಟ್ ಪುಂಡಿಕಾಯಿ ಹಿರಿಯ ವಿದ್ಯಾರ್ಥಿನಿ ಸುಶ್ಮಿತಾ ಭಟ್ ನೀಡಿದ ವಿದ್ಯಾರ್ಥಿ ವೇತನವನ್ನು ವಿತರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಲಿಂಗೇಶ್ವರ ಶೈಕ್ಷಣಿಕ ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ಕುಂಜತ್ತಾಯ ವಹಿಸಿದ್ದರು. ವೇದಿಕೆಯಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಶಶಿಧರ ರೈ ಕುತ್ಯಾಳ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರಮಾಣಿಲತ್ತಾಯ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಣ್ಣಯ್ಯ ಗೌಡ ಉರಿಕ್ಯಾಡಿ, ಶಾಲಾ ಸಂಚಾಲಕ ಸರ್ವೋತ್ತಮ ಬೋರ್ಕರ್ ಮತ್ತು ಶಾಲಾ ಮುಖ್ಯಗುರು ವನಿತಾ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ನಾಗಪ್ಪ ಗೌಡ, ರಾಮಣ್ಣ ರೈ, ನಿವೃತ್ತ ದೈಹಿಕ ಶಿಕ್ಷಕರಾದ ರಘುನಾಥ ರೈ ಕುತ್ಯಾಳ, ಗಜಾನನ ವಿದ್ಯಾಸಂಸ್ಥೆಯ ಸಂಚಾಲಕ ಶಿವರಾಂ. ಪಿ, ಪ್ರಾಂಶುಪಾಲರಾದ ಶಾಮಣ್ಣ, ಹಿರಿಯ ವಿದ್ಯಾರ್ಥಿಗಳಾದ ಅಜಿತ್ ರೈ, ಶಿಕ್ಷಕಿ ಪ್ರಶಾಂತಿ ರೈ , ಆಡಳಿತ ಮಂಡಳಿಯ ನಿರ್ದೇಶಕರಾದ ರವಿರಾಜ್ ರೈ ಸಾಜಂಕಾಡಿ ಹಾಗೂ ಹಿರಿಯ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸ್ವಾಗತವನ್ನು ದೈಹಿಕ ಶಿಕ್ಷಕರಾದ ಮುರಳಿ ಮೋಹನ ಶೆಟ್ಟಿ, ವಂದನಾರ್ಪಣೆಯನ್ನು ಹಿಂದಿ ಶಿಕ್ಷಕಿ ಸುಪ್ರಭಾ ಹಾಗೂ ನಿರೂಪಣೆಯನ್ನು ವಿಜ್ಞಾನ ಶಿಕ್ಷಕಿ ವಂದನ ನೆರವೇರಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.