ಅಕ್ರಮ ಸಾರಾಯಿ ಮಾರಾಟ ಪ್ರಕರಣ :ಆರೋಪಿ ದೋಷಮುಕ್ತ

0

ಪುತ್ತೂರು :5ವರ್ಷಗಳ ಹಿಂದೆ ನಡೆದ ಸಾರಾಯಿ ಪ್ಯಾಕೆಟ್ ಮಾರಾಟದ ಆರೋಪದಲ್ಲಿ ವಿಚಾರಣೆ ಎದುರಿಸಿದ್ದ ವ್ಯಕ್ತಿಯೋರ್ವ ಪುತ್ತೂರು ನ್ಯಾಯಾಲಯವು ದೋಷ ಮುಕ್ತಗೊಳಿಸಿ ತೀರ್ಪು ನೀಡಿದೆ.


ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಇಚಲಂಪಾಡಿ ಕ್ರಾಸ್ ಬಳಿ ಅಕ್ರಮವಾಗಿ ಸಾರಾಯಿ ಪ್ಯಾಕೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ವರ್ತಮಾನದ ಮೇರೆಗೆ ಉಪ್ಪಿನಂಗಡಿ ಠಾಣಾ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಮಾರು ರೂ 2, 608 ಮೌಲ್ಯದ 7. 740 ಲೀಟರ್ ಸಾರಾಯಿಯನ್ನು ವಶಪಡಿಸಿಕೊಂಡು ಆರೋಪಿ ನಾಗಪ್ಪ ಗೌಡರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಪೊಲೀಸರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.. ಇದೀಗ ಆರೋಪಿಯನ್ನು ದೋಷ ಮುಕ್ತಗೊಳಿಸಿ ಪುತ್ತೂರು ನ್ಯಾಯಾಲಯವು ತೀರ್ಪು ನೀಡಿದೆ. ಆರೋಪಿಯ ಪರವಾಗಿ ವಕೀಲೆ ಪ್ರಿಯಾ ಪೈಕ ರವರು ವಾದಿಸಿದ್ದರು.

LEAVE A REPLY

Please enter your comment!
Please enter your name here