ಬ್ರಹ್ಮಶ್ರೀ ನಾರಾಯಣ-ಮಹಾತ್ಮ ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ರವರಿಗೆ ಸನ್ಮಾನ

0

ಪುತ್ತೂರು:ಶಿವಗಿರಿ ಮಠ ವರ್ಕಲ, ಕೇರಳ, ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವದ ಅಂಗವಾಗಿ ಡಿ.3 ರಂದು ಕೊಣಾಜೆ ಮಂಗಳ ಗಂಗೋತ್ರಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಸಂದೇಶ ಭಾಷಣಗಾರರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ರವರನ್ನು ಕಾರ್ಯಕ್ರಮದ ಸಂಚಾಲಕರಾದ ರಕ್ಷಿತ್ ಶಿವರಾಂರವರು ಶಾಲು ಹೊದಿಸಿ ಸನ್ಮಾನಿಸಿದರು. 

ಊ ಸಂದರ್ಭದಲ್ಲಿ ಕೆ.ಸಿ ವೇಣುಗೋಪಾಲ್ ಮತ್ತು ಶಿವಗಿರಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿಗಳು ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ದ.ಕ ಜಿಲ್ಲೆಯಲ್ಲಿ ಶಿವಗಿರಿಯ ಶಾಖಾ ಮಠ ಸ್ಥಾಪನೆಗೆ ಐದು ಎಕ್ರೆ ನಿವೇಶನ ನೀಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ ಖಾದರ್, ಗೃಹಮಂತ್ರಿ ಡಾ|ಪರಮೇಶ್ವರ್, ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ರಮಾನಾಥ್ ರೈ, ವಿನಯಕುಮಾರ್ ಸೊರಕೆ, ಐವನ್ ಡಿ’ಸೋಜ, ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಲ್ಲದೆ ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರೂ, ನಾರಾಯಣ ಗುರು ಅಧ್ಯಯನ ಪೀಠದ ಸಲಹಾ ಮಂಡಳಿ ಸದಸ್ಯ ವಿಜಯಕುಮಾರ್ ಸೊರಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here