ಸಂತ ವಿಕ್ಟರ್ ಪ್ರೌಢಶಾಲೆಯಲ್ಲಿ ಮಕ್ಕಳ ಮಾಸೋತ್ಸವ-ಮಾಹಿತಿ ಕಾರ್ಯಗಾರ

0

ಪುತ್ತೂರು: ಗುಣಮಟ್ಟದ ಶಿಕ್ಷಣಕ್ಕಾಗಿ, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಮಾಸೋತ್ಸವ ಕಾರ್ಯಕ್ರಮ 2025-26 ಇದರ ಪ್ರಯುಕ್ತ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ಶಿಕ್ಷಣ ಸಂಪನ್ಮೂಲ ಕೇಂದ್ರ, ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇವರ ಸಹಯೋಗದೊಂದಿಗೆ ಮಕ್ಕಳ ಹಕ್ಕುಗಳು ಹಾಗೂ ಕಾನೂನು ಮಾಹಿತಿ, ಸೈಬರ್ ಅಪರಾಧದ ಬಗ್ಗೆ ಮಾಹಿತಿ, ಹದಿಹರೆಯದ ಸಮಸ್ಯೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಸಂತ ವಿಕ್ಟರ್ ಪ್ರೌಢಶಾಲೆಯಲ್ಲಿ ನಡೆಯಿತು.


ಪುತ್ತೂರು ನಗರ ಪೊಲೀಸ್ ಠಾಣಾ ಸಬ್‌ಇನ್‌ಸ್ಪೆಕ್ಟರ್ ಆಂಜನೇಯ ರೆಡ್ಡಿರವರು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸೈಬರ್ ಅಪರಾಧದ ವಿಧಗಳು, ಪರಿಣಾಮಗಳು, ಸೈಬರ್ ಅಪರಾಧದಿಂದ ರಕ್ಷಿಸಿಕೊಳ್ಳುವ ಕ್ರಮಗಳು, ಸೈಬರ್ ಅಪರಾಧದ ಬಗ್ಗೆ ದೂರು ನೀಡುವ ಕುರಿತು ತಿಳಿಸಿದರು.


ಸಂಪನ್ಮೂಲ ವ್ಯಕ್ತಿ, ಪತ್ರಕರ್ತರಾದ ಸಂಶುದ್ದೀನ್‌ರವರು ಮಕ್ಕಳ ಹಕ್ಕುಗಳು, ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಪ್ರಮುಖ ಕಾನೂನುಗಳು, ಮಕ್ಕಳ ಹಕ್ಕುಗಳ ಆಯೋಗದ ಬಗ್ಗೆ ಸೂಕ್ತವಾದ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಹಾಗೂ ವಕೀಲೆ ಚಂದ್ರಾವತಿಯವರು ಹದಿಹರೆಯದ ಸಮಸ್ಯೆಗಳು, ಪೋಕ್ಸೋ ಕಾಯಿದೆಯ ಬಗ್ಗೆ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಮಕ್ಕಳ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಿದರು.

ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾದ ಮಹಮ್ಮದ್ ರಫೀಕ್, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಕಾರ್ಯದರ್ಶಿ ಹಾಗೂ ಪ್ಯಾರಾ ಲೀಗಲ್ ಸ್ವಯಂ ಸೇವಕರಾದ ನಯನಾ ರೈ, ವಕೀಲೆ ರಾಜೇಶ್ವರಿ,ASI ಗಂಗಾಧರ್, ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯೆ, Senior Chamber International ಅಧ್ಯಕ್ಷೆ ಮಲ್ಲಿಕಾ ಜೆ. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ರೋಸಲಿನ್ ಲೋಬೊ ಪ್ರಾಸ್ತಾವಿಕವಾಗಿ ಮಾತನಾಡಿದರು. ನಯನಾ ರೈ ಸ್ವಾಗತಿಸಿ, ಮಹಮ್ಮದ್ ರಫೀಕ್ ವಂದಿಸಿದರು. ಶಿಕ್ಷಕಿ ಅನೀಶ ಡಿಸಿಲ್ವ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here