ಡಿ.13: ಪುತ್ತೂರು ತಾಲೂಕು ಪಂಚಾಯತ್‌ ನೂತನ ಕಚೇರಿ ಕಟ್ಟಡದ ಶಂಕುಸ್ಥಾಪನೆ

0

ಪುತ್ತೂರು: ಕರ್ನಾಟಕ ಸರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಪುತ್ತೂರು ಇದರ ನೂತನ ಕಚೇರಿ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ ಡಿ.13ರ ಶನಿವಾರ ಸಂಜೆ 4 ಗಂಟೆಗೆ ಪರ್ಲಡ್ಕದಲ್ಲಿ ನಡೆಯಲಿದೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಶೋಕ್‌ ಕುಮಾರ್‌ ರೈ ಅವರು ಅಧ್ಯಕ್ಷತೆ ವಹಿಸಲಿದ್ದು, ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್‌ಗಳ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here