ಪುತ್ತೂರು: ಬೆಟ್ಟಂಪಾಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಕೌಶಲ್ಯಗಳ ಕಾರ್ಯಗಾರ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಘಟಕವನ್ನು ಡಿ. 10ರಂದು ಉದ್ಘಾಟಿಸಲಾಯಿತು.
ದಕ್ಷಿಣ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರ ಶ್ರೀಕಾಂತ್ ಪೂಜಾರಿ ಬಿರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಹಾಗೂ ಸರಕಾರಿ ಹುದ್ದೆಗಳ ಕುರಿತು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಕಾರ್ಯಗಾರ ನಡೆಸಿದರು.

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೋಶವು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ, ಮಾರ್ಗದರ್ಶನ ಹಾಗೂ ತರಬೇತಿಗಳನ್ನು ನೀಡುವುದರ ಜೊತೆಗೆ ಬೇರೆ ಬೇರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವ್ಯಕ್ತಿಗಳಿಂದ ಕಾರ್ಯಗಾರ ನಡೆಸುವ ಉದ್ದೇಶವನ್ನು ಹೊಂದಿದೆ ಎಂಬುದಾಗಿ ಸಂಯೋಜಕ ಪ್ರೊ. ಅನಂತ್ ಭಟ್ ಹೇಳಿದರು.
“Rise with Skill : The Journey from Campus to Career” ಎಂಬ ವಿಷಯದಲ್ಲಿ ಮಂಗಳೂರಿನ ಎಂ ವಿ ಶೆಟ್ಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಪ್ರೊ. ವಿನುತ ಲಕ್ಷ್ಮಿ ಕಾರ್ಯಾಗಾರ ನಡೆಸಿಕೊಟ್ಟರು. ಭವ್ಯ ಶ್ರೀ ಸಹಕರಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ದಾಮೋದರ ಕಣಜಾಲು ಅಧ್ಯಕ್ಷತೆ ವಹಿಸಿದರು. ಗ್ರಂಥಪಾಲಕ ರಾಮ ಕೆ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ, ಆಂತರಿಕ ಗುಣಮಟ್ಟ ಭರವಸಕೋಶದ ಸಂಚಾಲಕ ಪ್ರೊ. ರಾಮಚಂದ್ರ ಡಿ, ಪ್ಲೇಸ್ಮೆಂಟ್ ಸೆಲ್ ಸಂಚಾಲಕರಾದ ಪ್ರೊ.ಅನಂತ್ ಭಟ್ ಉಪಸ್ಥಿತರಿದ್ದರು.