ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.11ರಂದು ರಾತ್ರಿ 34 ನೆಕ್ಕಿಲಾಡಿಯಲ್ಲಿ ನಡೆದಿದೆ.

ಮಠ ನಿವಾಸಿ ಬದ್ರುದ್ದೀನ್ ಗಾಯಗೊಂಡ ಬೈಕ್ ಸವಾರ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪಿನಂಗಡಿಯಿಂದ ನೆಕ್ಕಿಲಾಡಿ ಕಡೆಗೆ ಸಾಗುತ್ತಿದ್ದಾಗ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರಿನ ಮಧ್ಯೆ ಢಿಕ್ಕಿಯಾಗಿದೆ.
ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಚಕ್ರ ಸಿಡಿದಿದೆ. ಗಂಭೀರ ಗಾಯಗೊಂಡ ಈತನಿಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಬದ್ರುದ್ದೀನ್ ಕೂಟೇಲಿನಲ್ಲಿರುವ ಹೊಟೇಲೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.