




ಕಣ್ಣಿನ ಆರೈಕೆಯ ಕಡೆಗೆ ಹೆಚ್ಚು ಒತ್ತು ನೀಡಬೇಕು: ಜಗನ್ನಾಥ ಪೂಜಾರಿ ಮುಕ್ಕೂರು



ಪೆರುವಾಜೆ: ಮುಕ್ಕೂರು ನೇಸರ ಯುವಕ ಮಂಡಲದ ದಶಪ್ರಣತಿ ಪ್ರಯುಕ್ತ ಪೆರುವಾಜೆ ಗ್ರಾ.ಪಂ. ಸಭಾಂಗಣದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಡಿ.12ರಂದು ನಡೆಯಿತು.





ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಸ್ಟ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಪೆರುವಾಜೆ ಗ್ರಾ.ಪಂ.ಸಹಕಾರದೊಂದಿಗೆ ಈ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿದ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಮಾತನಾಡಿ, ಕಣ್ಣಿನ ರಕ್ಷಣೆಯ ಜತೆಗೆ ತೊಂದರೆಗಳನ್ನು ನಿವಾರಿಸಲು ಈ ಶಿಬಿರ ಪ್ರಯೋಜನಕಾರಿ. ಬೇರೆ ಬೇರೆ ಕಡೆಗಳಲ್ಲಿ ನಡೆಯುವ ಇಂತಹ ಶಿಬಿರಗಳ ಪ್ರಯೋಜನವನ್ನು ಜನರು ಪಡೆದುಕೊಳ್ಳಬೇಕು ಎಂದರು.



ವೇದಿಕೆಯಲ್ಲಿ ವೈದ್ಯರಾದ ಡಾ.ಸಾಗರ್, ನೇಸರ ಯುವಕ ಮಂಡಲದ ಕಾರ್ಯದರ್ಶಿ ರಾಮಚಂದ್ರ ಚೆನ್ನಾವರ, ಮುಕ್ಕೂರು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಜಯಂತ ಕುಂಡಡ್ಕ ಉಪಸ್ಥಿತರಿದ್ದರು. ಗ್ರಾ.ಪಂ. ಸಿಬ್ಬಂದಿ ಅಕ್ಷತಾ ನಾಗನಕಜೆ ಕಾರ್ಯಕ್ರಮ ನಿರೂಪಿಸಿದರು.







