ಪುತ್ತೂರು: ಆರ್ಯಾಪು ಗ್ರಾಮದ ಹಂಟ್ಯಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಡಿ.13ರಂದು ನಡೆಯಲಿದೆ.
ಬೆಳಿಗ್ಗೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಬಾಬು ಮರಿಕೆಯವರು ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ಸಭಾಕಾರ್ಯಕ್ರಮ ಬಹುಮಾನ ವಿತರಣೆ ನಡೆಯಲಿದೆ. ಆರ್ಯಾಪು ಗ್ರಾಪಂ ಸದಸ್ಯ ಯತೀಶ್ ದೇವ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಗ್ರಾಪಂ ಸದಸ್ಯೆ ಪೂರ್ಣಿಮಾ ರೈ, ಬಿಆರ್ಸಿ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು ಗ್ರಾಪಂ ಅಧ್ಯಕ್ಷೆ ಗೀತಾ ಎಚ್ ದೊಡ್ಡಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಪಂ ಉಪಾಧ್ಯಕ್ಷ ಅಶೋಕ ನಾಯ್ಕ, ಸದಸ್ಯ ಹರೀಶ್ ನಾಯಕ್, ಪವಿತ್ರ ರೈ ಬಾಳಿಲ, ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.
ಶಿಕ್ಷಣ ಪ್ರೇಮಿಗಳು, ಶಾಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಸ್ಡಿಎಂಸಿ ಅಧ್ಯಕ್ಷ ಬಾಬು ಮರಿಕೆ, ಮುಖ್ಯಶಿಕ್ಷಕಿ ಚಂದ್ರಾವತಿ ಕೆ, ವಿದ್ಯಾರ್ಥಿ ನಾಯಕಿ ಪೂಜಾಶ್ರೀ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಗೌಡ ಹಾಗೂ ಅಡುಗೆ ಸಿಬ್ಬಂದಿಗಳು, ಪೋಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.