ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇದರ ವತಿಯಿಂದ ಕೊಂಬೆಟ್ಟು ಸರಕಾರಿ ಪ್ರೌಢಶಾಲೆ ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರಾದ ಸುಂದರ್ – ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ -ಪ್ರಥಮ ಸ್ಥಾನ, ಪ್ರಾಥಮಿಕ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಲಕ್ಷ್ಮೀ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪ್ರಾಥಮಿಕ ವಿಭಾಗದ ಪಾಠೋಪಕರಣಗಳ ತಯಾರಿಕಾ ಸ್ಪರ್ಧೆಯಲ್ಲಿ ರಾಜೇಶ್ ದ್ವಿತೀಯ, ಪ್ರೌಢ ವಿಭಾಗದ ಪಾಠೋಪಕರಣಗಳ ತಯಾರಿಕಾ ಸ್ಪರ್ಧೆಯಲ್ಲಿ ವಿದ್ಯಾ ದ್ವಿತೀಯ, ಪ್ರಾಥಮಿಕ ವಿಭಾಗದ ಸಾಮಾನ್ಯ ರಸಪ್ರಶ್ನೆಯಲ್ಲಿ ಸೌಮ್ಯಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.
