ನಿಡ್ಪಳ್ಳಿ; ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ಡಿ.13ರಂದು ನಡೆದ ಪುತ್ತೂರು ಹಾಗೂ ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2025-26 ಪ್ರೌಢ ಶಾಲಾ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಅಮನ್ ರೈ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರು ಸುಬೋಧ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್. ಪಿ ಹಾಗೂ ಧನ್ಯ ಅವರ ಪುತ್ರ. ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ಗಿಳಿಯಾಲು ಮತ್ತು ಶಾಲಾ ಶಿಕ್ಷಕರು ಇವರನ್ನು ಅಭಿನಂದಿಸಿದ್ದಾರೆ.
