ಪುತ್ತೂರು: ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಈಸ್ಟ್ ನ ಆಶ್ರಯದಲ್ಲಿ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಂಗಣ, ಸಾಮೆತ್ತಡ್ಕ ಸುದಾನ ಸ್ಪೋರ್ಟ್ಸ್ ಕ್ಲಬ್, ಮರೀಲು ದಿ ಪುತ್ತೂರು ಕ್ಲಬ್ ನಲ್ಲಿ ರೋಟರಿ ಕುಟುಂಬ ಸದಸ್ಯರಿಗೆ ನಡೆದ ವಿವಿದ ಕ್ರೀಡಾ ಸ್ಪರ್ಧೆಯ ಜಿಲ್ಲಾ ಮಟ್ಟದ ಖೇಲ್ ಮಿಲನ್ ಕ್ರೀಡಾಕೂಟದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದೆ.

ಕ್ರಿಕೆಟ್, ಬ್ಯಾಡ್ಮಿಂಟನ್, ಸ್ವಿಮ್ಮಿಂಗ್, ವಾಲಿಬಾಲ್, ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದು ಕ್ಲಬ್ ಅಧ್ಯಕ್ಷ ಉಲ್ಲಾಸ್ ಪೈರವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ರೋಟರಿ ಕ್ಲಬ್ ಪುತ್ತೂರು ಸಿಟಿ ಸದಸ್ಯರು ಉಪಸ್ಥಿತರಿದ್ದರು.