




ಪುತ್ತೂರು: ಇತ್ತೀಚೆಗೆ ಅಪಘಾತಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ ಗಣೇಶ್ ಕರ್ಮಲ ಅವರ ಚಿಕಿತ್ಸೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ’ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತವನ್ನು ಹಸ್ತಾಂತರಿಸಲಾಯಿತು.




ಈ ಸಂದರ್ಭದಲ್ಲಿ ವಜ್ರತೇಜಸ್ ಹಿಂದೂ ಕವಚ್ ಇದರ ಅಧ್ಯಕ್ಷ ಮುರಳಿಕೃಷ್ಣ ಹಸಂತಡ್ಕ, ವಿ. ಹಿಂ. ಪ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಪುತ್ತೂರು ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡು, ಪುತ್ತೂರು ನಗರ ಬಜರಂಗದಳ ಸಂಯೋಜಕ್ ಜಯಂತ್ ಕುಂಜೂರುಪಂಜ, ಪುತ್ತೂರು ನಗರ ಸಪ್ತಾಹಿಕ್ ಮಿಲನ್ ಪ್ರಮುಖ್ ಸಂದೀಪ್ ಸಿಂಗಾಣಿ ಉಪಸ್ಥಿತರಿದ್ದರು.












