




ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಡಿ.12ರಂದು ಪ್ರಾರಂಭಗೊಂಡಿತ್ತು.
ಕುಕ್ಕಾಡಿ ತಂತ್ರಿ ಪ್ರೀತಂ ತಂತ್ರಿಗಳ ನೇತೃತ್ವದಲ್ಲಿ ನಡೆದ ಜಾತ್ರೋತ್ಸವದಲ್ಲಿ ಡಿ.12ರಂದು ಸಂಜೆ ಹೊರೆಕಾಣಿಕೆ ಸಮರ್ಪಣೆ, ದೇವತಾ ಪ್ರಾರ್ಥನೆ, ಉಗ್ರಾಣ ಪೂಜೆ, ಶ್ರೀಚಾಮುಂಡೇಶ್ವರಿ ಭಜನಾ ಮಂಡಳಿಯವರಿಂದ ಭಜನೆ ಹಾಗೂ ಅನ್ನಸಂತರ್ಪಣೆ ನಡೆಯಿತು.




ಡಿ.13ರಂದು ಬೆಳಿಗ್ಗೆ ಗಣಪತಿ ಹವನ, ಕಲಶಪೂಜೆ, ಆಶ್ಲೇಷ ಬಲಿ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ ಶ್ರೀ ದೇವರ ಬಲಿ ಹೊರಟು ಉತ್ಸವ, ದೇವರ ಸವಾರಿ ಮತ್ತು ಕಟ್ಟೆಪೂಜೆ ನಡೆದು ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ಅಧ್ಯಕ್ಷ ಗಂಗಾಧರ ಅಮೀನ್ ಹೊಸಮನೆ, ಕಾರ್ಯದರ್ಶಿ ಜಯಂತ ಶೆಟ್ಟಿ ಕಂಬಳತ್ತಡ್ಡ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಿ.ಟಿ ಸುರೇಶ್ ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಉತ್ಸವದಲ್ಲಿ ಭಾಗವಹಿಸಿದ್ದರು.












