ಪುತ್ತೂರು: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವವು ಡಿ.20ರಂದು ನಡೆಯಲಿದೆ.
ಡಿ.20ರಂದು ಬೆಳಿಗ್ಗೆ ನಡೆಯುವ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ಷಣ್ಮುಖದೇವ ಪ್ರೌಢಶಾಲೆಯ ಅಧ್ಯಕ್ಷ ತೀರ್ಥಾನಂದ ದುಗ್ಗಳ ವಹಿಸಲಿದ್ದಾರೆ. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ರೇವತಿ ದೀಪ ಪ್ರಜ್ವಲನೆ ಮಾಡಲಿದ್ದಾರೆ.ಕೊಳ್ತಿಗೆ ಗ್ರಾ.ಪಂ.ಉಪಾಧ್ಯಕ್ಷ ಪ್ರಮೋದ್ ಕೆ.ಎಸ್ ಅವರು ಬಹುಮಾನ ವಿತರಿಸಲಿದ್ದಾರೆ. ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್,ವಿವೇಕಾನಂದ ವಿದ್ಯಾವರ್ದಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್,ಷಣ್ಮುಖದೇವ ಭಜನಾ ಮಂಡಳಿಯ ಕಾರ್ಯದರ್ಶಿ ಸತ್ಯಪ್ರಕಾಶ್ ಕುಂಟಿಕಾನ ಪಾಲ್ಗೊಳ್ಳಲಿದ್ದಾರೆ.
ಸಂಜೆ ನಡೆಯುವ ಶಾಲಾ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಷಣ್ಮುಖದೇವ ಪ್ರೌಢಶಾಲೆಯ ಅಧ್ಯಕ್ಷ ತೀರ್ಥಾನಂದ ದುಗ್ಗಳ ವಹಿಸಲಿದ್ದಾರೆ.ಅತಿಥಿಗಳಾಗಿ ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು, ಪುತ್ತೂರು ದ್ವಾರಕ ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಪಾಲ್ಗೊಳ್ಳಲಿದ್ದಾರೆ ಎಂದು ಷಣ್ಮುಖದೇವ ಪ್ರೌಢಶಾಲೆಯ ಅಧ್ಯಕ್ಷ ತೀರ್ಥಾನಂದ ದುಗ್ಗಳ, ಸಂಚಾಲಕ ಶಿವರಾಮ ಭಟ್ ಬೀರ್ಣಕಜೆ, ಖಜಾಂಚಿ ದಿವಾಕರ ರೈ ಕೆರೆಮೂಲೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತ್ಯಾನಂದ ಬರಡಿಮಜಲು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ರೇವತಿ, ವಿದ್ಯಾರ್ಥಿ ನಾಯಕಿ ಯಶ್ಮಿತಾ, ಮುಖ್ಯಗುರು ಕೃಷ್ಣವೇಣಿ ಎಸ್. ಅವರು ತಿಳಿಸಿದ್ದಾರೆ.