




ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿರುವ ಬಾಲಗಣಪನಿಗೆ ಮೂಡಪ್ಪ ಸೇವೆಯು ಜ.6ಕ್ಕೆ ನಡೆಯಲಿದೆ. ಈ ನಿಟ್ಟಿನಲ್ಲಿ ಡಿ.15ರಂದು ದೇವಳದಲ್ಲಿ ಸೇವಾ ರಶೀದಿಯನ್ನು ಬಿಡುಗಡೆಗೊಳಿಸಲಾಯಿತು.




ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ವಿಶೇಷ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ಸುಭಾಶ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ, ವಿನಯ ಸುವರ್ಣ, ದಿನೇಶ್ ಪಿ.ವಿ, ನಳಿನಿ ಪಿ ಶೆಟ್ಟಿ, ಈಶ್ವರ ಬೇಡೆಕರ್, ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ರವಿಕೃಷ್ಣ ಕಲ್ಲಾಜೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.














