




ಪುತ್ತೂರು: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವವು ಡಿ.11ರಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ್ತ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಸ್ಕಾರವೆಂಬುದು ಕೇವಲ ಶಾಲೆಗೆ ಸೀಮಿತವಲ್ಲ, ಮನೆಯಲ್ಲೂ ಸಂಸ್ಕಾರವನ್ನು ಆಚರಣೆ ಮಾಡಬೇಕು ಎಂದು ಅವರು ಕರೆ ನೀಡಿದರು.



ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ವಿಷ್ಣು ಪ್ರಸಾದ್ ರವರು ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯನ್ನು ಮಾತ್ರವಲ್ಲದೆ, ಉತ್ತಮ ನಾಗರಿಕರಾಗಿ ಬೆಳೆಯುವಲ್ಲಿ ಸಫಲರಾಗುತ್ತಿರುವುದು ಶ್ಲಾಘನೀಯ ಎಂದರು.ಇನ್ನೋರ್ವ ಮುಖ್ಯ ಅತಿಥಿ ಕೃಷ್ಣಪ್ರಸಾದ್ ರವರು ಸಭೆಯನ್ನು ಉದ್ದೇಶಿಸಿ ಪ್ಲಾಸ್ಟಿಕ ರಹಿತ ಸ್ವಚ್ಛ ಭಾರತ ನಿರ್ಮಾಣ ಮಾಡುವ ಪ್ರಯತ್ನ ನಮ್ಮಿಂದ ನಮ್ಮ ಮನೆಯಿಂದ ಆಗಬೇಕು ಎಂದರು.





ಶಾಲಾ ಹಿರಿಯ ವಿದ್ಯಾರ್ಥಿ ಖ್ಯಾತ ಮನೋವೈದ್ಯರಾದ ಡಾ. ರಾಜೇಶ್ ಎಂ ರವರು ವಿದ್ಯಾರ್ಥಿಗಳು ತಮ್ಮ ಶರೀರ ಹಾಗೂ ಮನಸ್ಸಿಗೆ ಸಮಾನ ಮಹತ್ವ ನೀಡಬೇಕು, ಅಂಕ ಗಳಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಸಫಲತೆಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು .
ಬಳಿಕ ಕಳೆದ ಶೈಕ್ಷಣಿಕ ವರ್ಷ 2024-25ರಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 600 ಕ್ಕಿಂತಲೂ ಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕೌಟ್ ನಲ್ಲಿರಾಜ್ಯ ಪುರಸ್ಕಾರದ ಪಡೆದ ವಿದ್ಯಾರ್ಥಿಗಳು ಹಾಗೂ ಸ್ಪೋರ್ಟ್ಸ್ ನಲ್ಲಿ ಎಸ್.ಜಿ.ಎಫ್.ಐ. ಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ| ಶಿವಪ್ರಕಾಶ್ ಎಂ ಸ್ವಾಗತಿಸಿ, ಸದಸ್ಯರಾದ ಚಂದ್ರಶೇಖರ್ ವಂದಿಸಿದರು.
ವೇದಿಕೆಯಲ್ಲಿ ಆಡಳಿತ ಮಂಡಳಿಯ ಸಂಚಾಲಕ ರವಿ ನಾರಾಯಣ ಎಂ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಭಾಸ್ಕರ ಬಲ್ಯಾಯ, ಮುಖ್ಯೋಪಾಧ್ಯಾಯರುಗಳು, ಪ್ರೌಢ ಹಾಗೂ ಪ್ರಾಥಮಿಕ ಶಾಲಾ ನಾಯಕರು ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಶಾಂತಿ, ಅನುರಾಧ ಹಾಗೂ ಕವಿತಾ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಂದಂತಹ ಎಲ್ಲಾ ಅತಿಥಿಗಳಿಗೆ, ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.










