




ಪುತ್ತೂರು: ಬೆಳ್ತಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೆಲ್ಯಾಡಿ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಎ.ಜೆ ದಂತ ವಿಜ್ಞಾನ ಸಂಸ್ಥೆ ಇದರ ಸಹಯೋಗದೊಂದಿಗೆ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರವು ಡಿ.14ರಂದು ನೆಲ್ಯಾಡಿ ಪಿ.ಎಂ.ಶ್ರೀ ಶಾಲೆಯಲ್ಲಿ ನಡೆಯಿತು.




ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ. ಅಧ್ಯಕ್ಷತೆ ವಹಿಸಿದ್ದರು. ಸಂಘದ ನಿರ್ದೇಶಕ ಚಂದ್ರಶೇಖರ್ ನೆಲ್ಯಾಡಿ, ವರ್ತಕರ ಸಂಘದ ಅಧ್ಯಕ್ಷ ಸತೀಶ್ ಕೆ ಎಸ್, ಎ.ಜೆ ಆಸ್ಪತ್ರೆಯ ಡೆಂಟಲ್ ವಿಭಾಗದ ಅಸಿಸ್ಟೆಂಟ್ ಪ್ರೊ.ಡಾ| ಸಂದೀಪ್, ನೆಲ್ಯಾಡಿ ಪಿಎಂಶ್ರೀ ಹಿ.ಪ್ರಾ ಶಾಲಾ ಮುಖ್ಯಗುರು ವೀಣಾ ಮಸ್ಕರೆನಸ್, ಸಂಘದ ವಿಶೇಷಾಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.





ದೀಕ್ಷಾ.ಬಿ ಪ್ರಾರ್ಥಿಸಿದರು. ಸಂಘದ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ನೆಲ್ಯಾಡಿ ಶಾಖೆಯ ಶಾಖಾ ವ್ಯವಸ್ಥಾಪಕ ಪ್ರದೀಶ್ ನಡುವಾಲ್ ವಂದಿಸಿದರು. ಪೂರ್ಣಿಮಾ.ಎ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನಕರ ಕೆ.ಎಚ್, ಸಂಘದ ವಿವಿಧ ಶಾಖೆಯ ಶಾಖಾ ವ್ಯವಸ್ಥಾಪಕರುಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಧ್ಯಾಹ್ನದ ತನಕ ನಡೆದ ವೈದ್ಯಕೀಯ ಶಿಬಿರದಲ್ಲಿ ಸಂಸ್ಥೆಯ ಗ್ರಾಹಕರು, ಶಾಲೆಯ ಪೋಷಕರು, ವಿದ್ಯಾರ್ಥಿಗಳು, ಊರ ನಾಗರಿಕರು ಸೇರಿದಂತೆ ಸುಮಾರು 150ಕ್ಕೂ ಅಧಿಕ ಮಂದಿ ಭಾಗವಹಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.








