ಪುತ್ತೂರು: ಭಾರತೀಯ ವಾಯುಪಡೆಯ ಫ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾದ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಆಶಿಶ್ ಶಂಕರ್ ಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ, ಪ್ರಾಂಶುಪಾಲರಾದ ದೇವಿಚರಣ್ ರೈ ಎಂ , ಉಪನ್ಯಾಸಕ-ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದು, ಹಿರಿಯ ವಿದ್ಯಾರ್ಥಿ ಆಶಿಶ್ ಶಂಕರ್ ಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಯ ಪೋಷಕರು ಜತೆಗಿದ್ದರು.