ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದ ಜಾತ್ರೋತ್ಸವ, ದರ್ಶನ ಬಲಿ

0

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಬೂಡಿಯಾರು ಹೊಸಮನೆ ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಡಿ.14ರಂದು ದರ್ಶನ ಬಲಿ ಹಾಗೂ ಸಂಜೆ ದೈವಗಳ ನೇಮೋತ್ಸವ ನೆರವೇರಿತು.


ಕುಕ್ಕಾಡಿ ತಂತ್ರಿ ಪ್ರೀತಂ ತಂತ್ರಿಗಳ ನೇತೃತ್ವದಲ್ಲಿ ನಡೆದ ಜಾತ್ರೋತ್ಸವದಲ್ಲಿ ಡಿ.14ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಮಂತ್ರಾಕ್ಷತೆ, ಸಂಜೆ ದೈವಗಳ ಭಂಡಾರ ತೆಗೆದು ಕ್ಷೇತ್ರದ ದೈವಗಳಾದ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳ ನೇಮೋತ್ಸವ ನಡೆದು ಪ್ರಸಾದ ವಿತರಣೆಯೊಂದಿಗೆ ಜಾತ್ರೋತ್ಸವ ಸಂಪನ್ನಗೊಂಡಿತ್ತು.


ದೇವಸ್ಥಾನದ ಅಧ್ಯಕ್ಷ ಗಂಗಾಧರ ಅಮೀನ್ ಹೊಸಮನೆ, ಕಾರ್ಯದರ್ಶಿ ಜಯಂತ ಶೆಟ್ಟಿ ಕಂಬಳತ್ತಡ್ಡ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಿ.ಟಿ ಸುರೇಶ್ ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಉತ್ಸವದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here