ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) ,ಸವಣೂರು ಗ್ರಾಮ ಪಂಚಾಯತ್ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ಸುಳ್ಯ, ಪುತ್ತೂರು , ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಮಂಗಳೂರು, ಡಾ. ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ) ಸೆಂಚುರಿ ಗ್ರೂಪ್ಸ್ ಬೆಂಗಳೂರು ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರವು ಡಿ.17ರಂದು ಬೆಳಿಗ್ಗೆ ಗಂಟೆ 9.30ರಿಂದ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಠಾರದಲ್ಲಿ ನಡೆಯಲಿದೆ.
ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ಮಾಡಲಾಗುವುದು,ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುವುದು,,ನೇತ್ರದಾನ ಮಾಡಲಿಚ್ಚಿಸುವವರಿಗೆ ಅರ್ಜಿ ನೋಂದಾವಣೆಗೆ ಅವಕಾಶ ಕಲ್ಪಿಸಲಾಗುವುದು, ಅಗತ್ಯವುಳ್ಳವರಿಗೆ ಕನ್ನಡಕವನ್ನು ರಿಯಾಯಿತಿ ದರದಲ್ಲಿ ನೀಡಲಾಗುವುದು.ಆರೋಗ್ಯ ತಪಾಸಣೆಯ ನಂತರ ಅವಶ್ಯವಿದ್ದಲ್ಲಿ ಉಚಿತವಾಗಿ ಔಷಧಿ ನೀಡಲಾಗುವುದು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.