




ನೆಲ್ಯಾಡಿ: ಕೆಎಸ್ಆರ್ಟಿಸಿ ಬಸ್ಸು ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಿನಿಬಸ್ಸಿನಲ್ಲಿದ್ದ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಕೊಕ್ಕಡ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ತಿರುವು ಬಳಿ ಡಿ.15ರಂದು ಬೆಳಿಗ್ಗೆ ನಡೆದಿದೆ.



ಧರ್ಮಸ್ಥಳದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಮಿನಿ ಬಸ್ ಹಾಗೂ ಕೊಕ್ಕಡದಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ನಿಡ್ಲೆ ಗ್ರಾಮದ ಕುದ್ರಾಯ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಮಿನಿ ಬಸ್ಸಿನ ಚಾಲಕ ಚಂದನ್, ಪ್ರಯಾಣಿಕರಾದ ಧನರಾಜ್, ಮಂಜುನಾಥ್, ವಿಕಾಸ್ ಕುಮಾರ್ ಶೆಟ್ಟಿ ಎಂಬವರು ಗಾಯಗೊಂಡಿದ್ದಾರೆ.





ಕೆಎಸ್ಆರ್ಟಿಸಿ ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳು ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದ್ದು ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು ಎಂದು ವರದಿಯಾಗಿದೆ.









