ನಿಡ್ಪಳ್ಳಿ; ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಾಥಮಿಕ ಶಾಲಾ ಹಿರಿಯರ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚೂರಿಪದವು ಇಲ್ಲಿನ 7ನೇ ತರಗತಿ ವಿದ್ಯಾರ್ಥಿನಿ ಕೆ. ಆಯಿಷತ್ ಸಫಾ ಇವರು ಪ್ರಥಮ ಸ್ಥಾನವನ್ನು ಪಡೆದು ಜೆಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯಗುರು ಲಕ್ಷ್ಮಿಯವರು ತಿಳಿಸಿದ್ದಾರೆ.
