




ಪುತ್ತೂರು: ಶಿರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಪುತ್ತೂರಿನಲ್ಲಿ ಪೌರ ಸನ್ಮಾನ ಕಾರ್ಯಕ್ರಮ ನಡೆಸುವ ನಿಟ್ಟಿನಲ್ಲಿ ಡಿ.17ರಂದು ಸಂಜೆ ಪುತ್ತೂರಿನಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.



ಪೂರ್ವಭಾವಿ ಸಭೆಯು ಸಂಜೆ ಗಂಟೆ 4ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯ ವಠಾರದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.















