




ಮೌಲ್ಯಯುತ ಶಿಕ್ಷಣ ವಿದ್ಯಾರ್ಥಿಗಳಿಗೆ ಅತೀ ಅಗತ್ಯ- ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕಿ ,ಸರೋಜಿನಿ ನಾಗಪ್ಪಯ್ಯ



ಪುತ್ತೂರು: ಸರಕಾರಿ ಪ್ರೌಢಶಾಲೆ ನೆಟ್ಟಣಿಗೆ ಮುಡ್ನೂರು ಇಲ್ಲಿನ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ ದಶಪಥ ಸಭಾಂಗಣದ ಮೇನಾಲ ಕಿಶನ್ ಜಲದರ ಶೆಟ್ಟಿ ವೇದಿಕೆಯಲ್ಲಿ ನಡೆಯಿತು.





ಧ್ವಜಾರೋಹಣ ಗೈದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕಿ ಸರೋಜಿನಿ ನಾಗಪ್ಪಯ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಉತ್ತಮ ಸಂಸ್ಕಾರ ಮತ್ತು ಮೌಲ್ಯಯುತ ಬದುಕನ್ನು ಸಾಗಿಸಲು ಪೂರಕವಾದ ಶಿಕ್ಷಣ ವ್ಯವಸ್ಥೆ ಇರಬೇಕು. ಈ ಶಾಲೆಯಲ್ಲಿ ಶಿಕ್ಷಣಕ್ಕೆ ಪೂರಕವಾದ ಎಲ್ಲಾ ಚಟುವಟಿಕೆಗಳು ನಡೆಯುತ್ತಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶದಲ್ಲಿ ಬಂದಿರುತ್ತದೆ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಅತ್ಯುತ್ತಮ ಕೆಲಸವನ್ನು ಮಾಡುತ್ತಿದೆ ಎಂದರು.
ಶಾಲಾ ಅಭಿವೃದ್ಧಿ ಸಮಿತಿಯು ಉತ್ತಮ ಕೆಲಸವನ್ನು ಮಾಡುತ್ತಿದೆ
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮನಾಥ್ ಶೆಟ್ಟಿ ಮಾತನಾಡಿ,ಶಾಲೆಯು ಅಭಿವೃದ್ಧಿ ಹೊಂದಬೇಕಾದರೆ ಶೈಕ್ಷಣಿಕ ಮತ್ತು ಮೂಲಭೂತ ಸೌಕರ್ಯಗಳು ಉತ್ತಮವಾಗಿರಬೇಕು. ಶಾಲೆಯಲ್ಲಿ ಕಾರ್ಯಾಧ್ಯಕ್ಷ ಶ್ರೀರಾಮ್ ಪಕ್ಕಳ ಇವರು ಮತ್ತು ಎಲ್ಲಾ ಸಮಿತಿಯ ಸದಸ್ಯರು ಕ್ರಿಯಾಶೀಲರಾಗಿರುವುದರಿಂದ ಮೂಲಭೂತ ವ್ಯವಸ್ಥೆಗಳು ಚೆನ್ನಾಗಿದೆ. ಎಸ್ ಎಸ್ ಎಲ್ ಸಿ ಯಲ್ಲಿ ಸತತವಾಗಿ ಶೇಕಡ 100 ಫಲಿತಾಂಶವನ್ನು ಪಡೆದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ಗುರು ಮತ್ತು ಗುರಿ ಇದ್ದಾಗ ಸಾಧನೆ ಮಾಡಲು ಸಾಧ್ಯ
ನಿವೃತ್ತ ಮುಖ್ಯ ಶಿಕ್ಷಕ ವಿ. ನಾಗಪ್ಪಯ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಮಕ್ಕಳನ್ನು ರೂಪಿಸುತ್ತಿರುವ ಶಿಕ್ಷಕರಿಗೆ ಸಮಾಜದಲ್ಲಿ ಗೌರವ ನೀಡುವುದು ಕರ್ತವ್ಯವಾಗಿದೆ. ವಿದ್ಯಾರ್ಥಿಗಳಿಗೆ ಸ್ಪಷ್ಟ ಗುರಿ ಇದ್ದರೆ ಸಾಧನೆ ಮಾಡಲು ಸಾಧ್ಯ ಎಂದರು.
ಶಾಲೆಯ ಬೆಳವಣಿಗೆ ಸಂತಸವನ್ನು ತಂದಿದೆ
ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಮ ಮೇನಾಲ ಮಾತನಾಡಿ,ಊರವರ ಪ್ರಯತ್ನದಿಂದ ಆರಂಭವಾದ ಪ್ರೌಢಶಾಲೆ ಇಂದು ಪಠ್ಯ ಮತ್ತು ಸಹಪಠ್ಯಗಳಲ್ಲಿ ಸಾಧನೆ ಮಾಡುತ್ತಿರುವುದನ್ನು ಕಂಡಾಗ ಸಂತೋಷವಾಗುತ್ತದೆ. ಇನ್ನೂ ಪ್ರೌಢಶಾಲೆ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು . ವಿದ್ಯಾರ್ಥಿಗಳಿಗೆ ಕ್ರೀಡೆ ಸಹಪಠ್ಯ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು.
ಶಾಲಾ ವಾರ್ಷಿಕೋತ್ಸವ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣ
ಸಭಾಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಫೌಝಿಯಾ ಇಬ್ರಾಹಿಂ ಮಾತನಾಡಿ ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆಯು ಶಾಲೆಗಳಲ್ಲಿ ಸಿಗುತ್ತದೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು .ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತಿಯಿಂದ ಕೆ.ಪಿ.ಎಸ್ ಸ್ಕೂಲಿಗೆ ಬೇಕಾದ ಸಹಕಾರ ನೀಡಲು ನಾವು ಬದ್ಧರಾಗಿದ್ದೇವೆ ಎಂದರು. ಶಾಲೆಯು ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಅತ್ಯುತ್ತಮ ಕೆಲಸವನ್ನು ಮಾಡುತ್ತಿದೆ ಎಂದರು.
ಶಾಲಾ ಹಿರಿಯ ವಿದ್ಯಾರ್ಥಿ ಅಬ್ದುಲ್ ಖಾದರ್ ಇಶಾಕ್ ಕರ್ನೂರು ಉದ್ಯಮಿ ದುಬೈ ಇವರು ಮಾತನಾಡಿ, ಎಲ್ಲ ವಿದ್ಯಾರ್ಥಿಗಳು ಚೆನ್ನಾಗಿ ಕಲಿತು ಉನ್ನತ ಉದ್ಯೋಗವನ್ನು ಪಡೆಯಿರಿ ಎಂದು ಶುಭ ಹಾರೈಸಿದರು.
ಶಾಲಾ ಕಾರ್ಯಾಧ್ಯಕ್ಷರಾದ ಶ್ರೀರಾಮ್ ಪಕ್ಕಳ ಸ್ವಾಗತಿಸಿ ಪ್ರಾಸ್ತಾವಿಕ ವಾಗಿ ಮಾತನಾಡಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಮಾರ್ಗದರ್ಶನ ಮತ್ತು ಅನುದಾನಗಳನ್ನು ನೀಡುತ್ತಿರುವ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮತ್ತು ಶಾಲೆಯು ಉತ್ತಮ ಫಲಿತಾಂಶ ಪಡೆಯಲು ಕಾರಣಕರ್ತರಾದ ಮುಖ್ಯ ಶಿಕ್ಷಕರು ಮತ್ತು ಅಧ್ಯಾಪಕ ವೃಂದವನ್ನು ಅಭಿನಂದಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಪ್ರೇಮ್ ಕುಮಾರ್ ವಾರ್ಷಿಕ ವರದಿ ಮಂಡಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತಿ ಸದಸ್ಯರಾದ ಇಬ್ರಾಹಿಂ ಪಳ್ಳತ್ತೂರು, ವೆಂಕಪ್ಪ ಮೇನಾಲ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ವಿಕ್ರಮ್ ರೈ ಸಾಂತ್ಯ,ಸೂಫಿ ಬಾಂಟಡ್ಕ, ಮೂಸನ್ ಕರ್ನೂರು, ಶಿಕ್ಷಣ ತಜ್ಞರಾದ ಮಹಾಬಲ ಕರ್ನೂರು, ಮಹಮದ್ ಪಳ್ಳತ್ತೂರು, ಅಬ್ದುಲ್ ಖಾದರ್ ಸುರುಳಿ ಮೂಲೆ, ಶಶಿಕಲಾ,ಗೌಡ ಅಡ್ಡನ್ ತಡ್ಕ, ಫೌಝಿಯಾ ,ಬಶೀರ್, ರೂಪ ಉಪಸ್ಥಿತರಿದ್ದರು.

ಸಮಾಜ ವಿಜ್ಞಾನ ಶಿಕ್ಷಕಿ ಇಂದಿರಾ, ಕನ್ನಡ ಭಾಷಾ ಶಿಕ್ಷಕಿ ದಮಯಂತಿ, ಹಿಂದಿ ಶಿಕ್ಷಕಿ ಮೀನಾಕ್ಷಿ, ವಿಜ್ಞಾನ ಶಿಕ್ಷಕಿ ಪ್ರೀತು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಕಚೇರಿ ಗುಮಾಸ್ತರಾದ ಹೇಮಾವತಿ ಸಹಕರಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು. ಗಣಿತ ಶಿಕ್ಷಕರಾದ ಪುರುಷೋತ್ತಮ ಬಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ದೇವಿ ಪ್ರಕಾಶ್ ಶೆಟ್ಟಿ ಕುತ್ಯಾಳ ಕಾರ್ಯಕ್ರಮ ನಿರ್ವಹಿಸಿದರು.










