ಹಾರಾಡಿ ಶಾಲೆಯಲ್ಲಿ ಪುತ್ತೂರು, ಕಡಬ ತಾ|ಮಟ್ಟದ ಪ್ರತಿಭಾ ಕಾರಂಜಿ ಕಲನ-2025 : ಪ್ರಾಥಮಿಕ ಶಾಲಾ ವಿಭಾಗದ ಸ್ಪರ್ಧೆಗಳ ಉದ್ಘಾಟನೆ

0


ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಹಾರಾಡಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಹಾರಾಡಿ ಶಾಲಾ ಸಭಾಂಗಣದಲ್ಲಿ ನಡೆದ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲನ-2025 ಕಾರ್ಯಕ್ರಮದಲ್ಲಿ ಡಿ.5ರಂದು ಪ್ರಾಥಮಿಕ ಶಾಲಾ ವಿಭಾಗದ ಸ್ಪರ್ಧೆಗಳು ನಡೆಯಿತು.


ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿಯವರು ದೀಪ ಬೆಳಗಿಸಿ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಚಾಲನೆ ನೀಡಿ ಮಾತನಾಡಿ ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಹಾಗೂ ಇಲಾಖೆಯ ವಿವಿಧ ಅಧಿಕಾರಿಗಳ ಸಹಕಾರದೊಂದಿಗೆ ಕಲನ-2025 ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿ ಶುಭ ಹಾರೈಸಿದರು. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ., ದ.ಕ.ಜಿಲ್ಲಾ ಪ್ರಾ.ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವಿಮಲ್ ನೆಲ್ಯಾಡಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಲೋಚನಿ, ಉಪಾಧ್ಯಕ್ಷರಾದ ಹರಿಪ್ರಸಾದ್ ಶುಭಹಾರೈಸಿದರು.

ಶಿಕ್ಷಣ ಸಂಯೋಜಕರಾದ ನವೀನ್ ಸ್ಟೀಫನ್ ವೇಗಸ್, ದೈ.ಶಿ ಸಂಘದ ತಾಲೂಕು ಅಧ್ಯಕ್ಷರಾದ ಸುಧಾಕರ್ ರೈ ಗಿಳಿಯಾಲು, ದೈ.ಶಿ.ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಸೀತಾರಾಮ ಗೌಡ ಮಿತ್ತಡ್ಕ, eco ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕರಾದ ಕೆ.ಕೆ ಮಾಸ್ತರ್ ಸ್ವಾಗತಿಸಿದರು. ಶಿಕ್ಷಕಿ ಧನ್ಯಕುಮಾರಿ ವಂದಿಸಿ, ವನಿತಾ ಜಗದೀಶ್ ಹಾಗೂ ಜನಾರ್ದನ ದುರ್ಗ ಕಾರ್ಯಕ್ರಮ ನಿರೂಪಿಸಿದರು. ಪುತ್ತೂರು, ಕಡಬ ತಾಲೂಕು ಶಾಲಾ ಶಿಕ್ಷಕರು, ಸ್ಪರ್ಧಾ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಪ್ರಾಥಮಿಕ ಕಿರಿಯ ವಿಭಾಗದಲ್ಲಿ ತೆಂಕಿಲ ವಿವೇಕಾನಂದ ಶಾಲೆ ಹಾಗೂ ಹಿರಿಯ ವಿಭಾಗದಲ್ಲಿ ಕಾಣಿಯೂರು ಪ್ರಗತಿ ಶಾಲೆ ಚಾಂಪಿಯನ್ ಆಗಿ ಹೊರಹೊಮ್ಮಿತು.

LEAVE A REPLY

Please enter your comment!
Please enter your name here