




ವಿಟ್ಲ: ವಿಟ್ಲ ಪಟ್ಟಣ ಪಂಚಯಾತ್ ವ್ಯಾಪ್ತಿಯ ಸೇರಾಜೆ ಬೈಲು ಮತ್ತು ಜೋಗಿ ಮಠದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರ ಅನುದಾನದಲ್ಲಿ ಅಭಿವೃದ್ಧಿಗೊಂಡ ರಸ್ತೆಗಳನ್ನು ವಿಟ್ಲ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರ ನೇತೃತ್ವದಲ್ಲಿ ಮುಖಂಡರು ವೀಕ್ಷಣೆ ನಡೆಸಿದರು.




ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳಿಧರ ರೈ ಮಠಂತಬೆಟ್ಟು, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ ಕೆ.ಬಿ., ಪುತ್ತೂರು ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಉಮಾನಾಥ್ ಶೆಟ್ಟಿ ಪೆರ್ನೆ, ವಿಟ್ಲ ನಗರಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಪದ್ಮಿನಿ, ಹಸೈನಾರ್ ನೆಲ್ಲಿಗುಡ್ಡೆ, ವಿಟ್ಲ ವಲಯಕಾಂಗ್ರೆಸ್ ಅಧ್ಯಕ್ಷರಾದ ಶೇಖ್ ಆಲಿ ಸೇರಾಜೆ ಬೂತ್ ಅಧ್ಯಕ್ಷ
ಮಹಮ್ಮದ್ ಶರೀಫ್, ರಕ್ಷಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಕುರುಂಬಳ, ವಿಟ್ಲ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಿನೆಲ್ ವಿಲಿಯಂ ತೋರಸ್ ಮೊದಲಾದವರು ಉಪಸ್ಥಿತರಿದ್ದರು.














