




ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯದ ರೆಂಜ ಒಕ್ಕೂಟದ ಸರ್ವ ಸದಸ್ಯರ ಕ್ರೀಡಾಕೂಟ- 2025 ಕಾರ್ಯಕ್ರಮ ಡಿ.14ರಂದು ಇರ್ದೆ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು.
ದ.ಕ.ಜಿಲ್ಲಾ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಕ್ರೀಡಾಕೂಟ ಉದ್ಘಾಟಿಸಿ ಶುಭಹಾರೈಸಿದರು.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಸಮಿತಿ ಸದಸ್ಯ ಜಗನ್ನಾಥ ರೈ ಕೊಮ್ಮಂಡ, ಇರ್ದೆ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಪಿ, ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಗುರು ರಾಜೇಶ್ ನೆಲ್ಲಿತ್ತಡ್ಕ ಅತಿಥಿಗಳಾಗಿ ಭಾಗವಹಿಸಿದ್ದರು.




ಪವಿತ್ರ ಮಿತ್ತಡ್ಕ ಮತ್ತು ನಳಿನಿ ಮಿತ್ತಡ್ಕ ಪ್ರಾರ್ಥಿಸಿದರು.ಪ್ರೇಮಲತಾ ಕೂವೆಂಜ ಸ್ವಾಗತಿಸಿದರು. ರವಿನಾಥ ಕೋನಡ್ಕ ವಂದಿಸಿದರು. ಬೆಟ್ಟಂಪಾಡಿ ವಲಯ ಮೆಲ್ವೀಚಾರಕ ಸೋಹನ್. ಜಿ ಕಾರ್ಯಕ್ರಮ ನಿರೂಪಿಸಿದರು.





ಸಮಾರೋಪ ಸಮಾರಂಭ ರೆಂಜ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ನಾಯ್ಕ.ಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಯೋಜನೆಯ ತಾಲೂಕು ಯೋಜನಾಧಿಕಾರಿ ಶಶಿಧರ್ ಎಂ, ಬೆಟ್ಟಂಪಾಡಿ ದೇವಾಲಯದ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು,ಜಗನ್ನಾಥ ರೈ ಕೊಮ್ಮಂಡ, ಯೋಜನೆಯ ಬೆಟ್ಟಂಪಾಡಿ ವಲಯಾಧ್ಯಕ್ಷ ಬಾಲಕೃಷ್ಣ ಕೆ ಅತಿಥಿಗಳಾಗಿ ಭಾಗವಹಿಸಿದ್ದರು. ಸ್ಪರ್ಧಾ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು.
ಗೌರವಾರ್ಪಣೆ ಕಾರ್ಯಕ್ರಮ; ರೆಂಜ ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಸಂಕಪ್ಪ ರೈ ಕೂವೆಂಜ, ಲಿಂಗಪ್ಪ ಗೌಡ ಮಿತ್ತಡ್ಕ ಹಾಗೂ ರವಿನಾಥ ಕೋನಡ್ಕ ಇವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಸೇವಾ ಪ್ರತಿನಿಧಿ ಜಗನ್ನಾಥ ಪಾಟಾಳಿ ಕೋನಡ್ಕ ಸ್ವಾಗತಿಸಿ, ಪ್ರವೀಣ್ ರೈ ಬರೆ ವಂದಿಸಿದರು.ವಲಯ ಮೆಲ್ವೀಚಾರಕ ಸೋಹನ್. ಜಿ ಬಹುಮಾನದ ಪಟ್ಟಿ ವಾಚಿಸಿ ನಿರೂಪಿಸಿದರು.
ವಲಯದ ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.








