




ಅರಿಯಡ್ಕ : ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.19 ರಂದು ಸಂಸ್ಥೆಯ ವರ್ಷದ ಸಂಭ್ರಮ “ಕಲಾಸಿರಿ” ಕಾರ್ಯಕ್ರಮ ನಡೆಯಲಿದೆ.



ಪೂರ್ವಾಹ್ನ ಧ್ವಜಾರೋಹಣ, ಸಭಾ ಕಾರ್ಯಕ್ರಮ, ಬಹುಮಾನ ವಿತರಣಾ ಕಾರ್ಯಕ್ರಮ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ “ಹೆಜ್ಜೆ ಗೆಜ್ಜೆ” ಸಭಾ ಕಾರ್ಯಕ್ರಮ ಮತ್ತು ಗೌರವಾರ್ಪಣೆ ನಡೆಯಲಿದೆ.






ಈ ಕಾರ್ಯಕ್ರಮದಲ್ಲಿ ಗಣ್ಯರು, ಜನಪ್ರತಿನಿಧಿಗಳು, ಪೋಷಕರು, ವಿದ್ಯಾಭಿಮಾನಿಗಳು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಶಾಲಾ ಮುಖ್ಯೋಪಾಧ್ಯಾಯನಿ ಶಶಿಕಲಾ ಎಂ ಮತ್ತು ಶಾಲಾ ಎಸ್.ಡಿ. ಎಂ.ಸಿ ಅಧ್ಯಕ್ಷ ಅಪ್ಪಯ್ಯ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








